SHIVAMOGGA LIVE NEWS | 14 AUGUST 2023
SORABA : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Police Raid) ನಡೆಸಿದ ಪೊಲೀಸರು ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ್ದಾರೆ. 525 ಗ್ರಾಂ ತೂಕದ ಗಾಂಜಾ ಗಿಡಗಳು ಸಿಕ್ಕಿವೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೊರಬ ತಾಲೂಕು ಕಡಸೂರು (Kadasuru) ಗ್ರಾಮದ ರಾಮಚಂದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಹಿತ್ತಲಿನಲ್ಲಿ ಅಡಿಕೆ ಗಿಡಗಳ ಮಧ್ಯೆ ಸಿಮೆಂಟ್ ಚೀಲದಲ್ಲಿ ಮಣ್ಣು ತುಂಬಿ ಗಾಂಜಾ ಬೆಳೆಯಲಾಗಿತ್ತು. 525 ಗ್ರಾಂ ತೂಕದ ಅಂದಾಜು 3 ಸಾವಿರ ರೂ. ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಮೂವರು ಅರೆಸ್ಟ್, ವಿಚಾರಣೆ ವೇಳೆ ಹೇಳಿದ್ದೇನು?
ಸೊರಬ ಠಾಣೆ ಸಬ್ ಇನ್ಸ್ಪೆಕ್ಟರ್ ಮಾಳಪ್ಪ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ರಾಮಚಂದ್ರಪ್ಪ ವಿರುದ್ಧ ಎನ್ಡಿಪಿಎಸ್ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200