ಖಚಿತ ಮಾಹಿತಿ ಮೇರೆಗೆ ಎನ್‌.ಟಿ.ರಸ್ತೆಯಲ್ಲಿ ಪೊಲೀಸರ ದಾಳಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟ (OC Matka Gambling) ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ದೊಡ್ಡಪೇಟೆ ಪೊಲೀಸ್ ಠಾಣೆಯ (Doddapete Police Station) ಪೊಲೀಸರು ಬಂಧಿಸಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ನಗರದ ಎನ್.ಟಿ ರಸ್ತೆಯ ಸಮೀಪ ಈ ಘಟನೆ ನಡೆದಿದೆ. ಬಂಧಿತ ಆರೋಪಿಯಿಂದ ನಗದು ಹಣ ಹಾಗೂ ಜೂಜಾಟದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದೊಡ್ಡಪೇಟೆ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಮೇ 14ರಂದು ಮಧ್ಯಾಹ್ನ ಗಸ್ತಿನಲ್ಲಿದ್ದರು. ಈ ವೇಳೆ ಎನ್.ಟಿ ರಸ್ತೆಯ ವೆಂಕಟೇಶ್ವರ ದೇವಸ್ಥಾನದ ಹತ್ತಿರ ವ್ಯಕ್ತಿಯೊಬ್ಬ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ. ಪೊಲೀಸರು ದಾಳಿ ಮಾಡಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga-Police-Jeep