ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | Gambling| 12 ಏಪ್ರಿಲ್ 2022
ಕಾಡಿನಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮೂವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದು ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶ್ರೀಧರ್ (27), ಸುರೇಶ್ (26), ಬಸವರಾಜ (31) ಬಂಧಿತರು. ಗಾಜನೂರಿನ ಕಾಡಿನಲ್ಲಿ ಇವರು ಜೂಜಾಟ ಆಡುತ್ತಿದ್ದರು.
ಜೂಜಾಟದ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಪೊಲೀಸರನ್ನು ಕಂಡ ಕೂಡಲೆ ಜೂಜಾಟ ಆಡುತ್ತಿದ್ದವರು ಪರಾರಿಯಾಗಿದ್ದಾರೆ.
ಬೆನ್ನೆಟ್ಟಿದ ಪೊಲೀಸರು ಶ್ರೀಧರ್, ಸುರೇಶ್, ಬಸವರಾಜ ಎಂಬುವವರನ್ನು ಬಂಧಿಸಿದ್ದಾರೆ. ಪ್ರಸನ್ನ, ಶಿವಕುಮಾರ್, ಸಂದೀಪ ಎಂಬುವವರು ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ | ನಡುರಸ್ತೆಯಲ್ಲಿ ಸಾಲದ ಹಣಕ್ಕಾಗಿ ಕಿತ್ತಾಟ, ಒಬ್ಬನಿಗೆ ಚಾಕು ಇರಿತ
Gambling
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200