SHIVAMOGGA LIVE NEWS | 8 ಮಾರ್ಚ್ 2022
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಜನೂರು ಮೊರಾರ್ಜಿ ವಸತಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಜನರು ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿದ್ದರು. ಇದರ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಖಾಕಿ ಕಂಡು ಕಾಲ್ಕಿತ್ತರು
ಪೊಲೀಸರು ದಾಳಿ ನಡೆಸುತ್ತಿದ್ದಂತೆ ಜೂಜಾಟದಲ್ಲಿ ತೊಡಗಿದ್ದ ಆರು ಮಂದಿ ಪರಾರಿಯಾಗಿದ್ದಾರೆ. ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದುಕೊಂಡಿದ್ದಾರೆ. ಅವರನ್ನು ಪ್ರಕಾಶ್ ಮತ್ತು ಶರತ್ ಎಂದು ಗುರುತಿಸಲಾಗಿದೆ. ಇನ್ನು, ಪರಾರಿಯಾದ ಪಾಪಣ್ಣ, ಸಂದೀಪ, ಮನು, ಪ್ರಸನ್ನ ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಹಣ, ಇಸ್ಪೀಟ್ ಕಾರ್ಡ್ ಸೀಜ್
ಅಂದರ್, ಬಾಹರ್ ಆಟದಲ್ಲಿ ತೊಡಗಿಸಿದ್ದ 19,240 ರೂ. ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಎಸ್ಐ ಶಿವಪ್ರಸಾದ್, ಸಿಬ್ಬಂದಿ ರಾಜು, ಸಂತೋಷ್, ಜಿಲಾನಿ, ಸಂತೋಷ್, ಚೇತನ್, ಶರತ್ಚಂದ್ರ, ಅರಿಹಂತ ಶಿರಹಟ್ಟಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200