ಗಾಂಧಿ ಬಜಾರ್ ಕುಚಲಕ್ಕಿ ಕೇರಿಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಪ್ರತಿಷ್ಠಿತ ಕಂಪನಿಯೊಂದರ ಬಾಟಲಿಗಳನ್ನು ಹೋಲುವ ನಕಲಿ ಬಾಟಲಿಗಳಲ್ಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ. ಕೊಬ್ಬರಿ ಎಣ್ಣೆ ಕಂಪನಿ ಪ್ರತಿನಿಧಿಗಳು ನೀಡಿದ ದೂರಿನ ಆಧಾರದ ಮೇಲೆ ರೇಡ್ ಮಾಡಲಾಗಿದೆ.

ಗಾಂಧಿ ಬಜಾರ್‍ನ ಕುಚಲಕ್ಕಿ ಕೇರಿಯ ಮಳಿಗೆಯೊಂದರ ಮೇಲೆ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಂಗಡಿಯಲ್ಲಿದ್ದ 26 ಬಾಟಲಿ ಕೊಬ್ಬರಿ ಎಣ್ಣೆಯನ್ನು ವಶಕ್ಕೆ ಪಡೆಯಲಾಗಿದೆ.

ಪ್ರತಿಷ್ಠಿತ ಕಂಪನಿ ಬ್ರಾಂಡಿಂಗ್‍ನಂತೆ ಇತ್ತು

ನೀಲಿ ಬಾಟಲಿಯಲ್ಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡಲಾಗುತ್ತಿತ್ತು. ಪ್ರತಿಷ್ಠಿತ ಕಂಪನಿಯ ಬ್ರಾಂಡಿಂಗ್‍ನಂತೆಯೇ ನಕಲಿ ಕಂಪನಿಯ ಕೊಬ್ಬರಿ ಎಣ್ಣೆ ಬಾಟಲಿಗಳಿದ್ದವು. ಹೆಸರು, ಲೋಗೋವನ್ನು ಕೂಡ ಅದೆ ರೀತಿ ಸಿದ್ಧಪಡಿಸಲಾಗಿತ್ತು.

ಕೊಬ್ಬರಿ ಎಣ್ಣೆ ತುಂಬಿದ್ದ ನಕಲಿ ಬಾಟಲಿಗಳನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ಈ ಸಂಬಂಧ ಅಂಗಡಿ ಮಾಲೀಕ ಮತ್ತು ಮಾರಾಟ ಮಾಡುತ್ತಿರುವ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!