ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಡಿಸೆಂಬರ್ 2021
ಶಿವಮೊಗ್ಗದ ಕುವೆಂಪು ನಗರದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
ಬೀರನಕೆರೆ ತಾಂಡಾದ ಕೌಶಿಕ್ (21), ಯುವರಾಜ (23), ವಿನೋದ (24) ಬಂಧಿತರು. ಇವರು ಕುವೆಂಪು ನಗರದ ಡಿವಿಎಸ್ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.
ಡಿವಿಎಸ್ ಬಡಾವಣೆಯಲ್ಲಿ ಬೈಕ್ ನಿಲ್ಲಿಸಿಕೊಂಡು ಈ ಮೂವರು ಗಾಂಜಾ ಮಾರಾಟ ಮಾಡುತ್ತಿದ್ದರು. ದಾಳಿ ವೇಳೆ 435 ಗ್ರಾಂ ಗಾಂಜಾ ಪತ್ತೆಯಾಗಿದೆ. ಕೃತ್ಯಕ್ಕೆ ಬಳಕೆ ಮಾಡಿಕೊಂಡಿದ್ದ ಎರಡು ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422