ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022
ಮಲವಗೊಪ್ಪದಲ್ಲಿ ಪಿಎಸ್ಐ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಓ.ಸಿ. ಬರೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆತನಿಂದ ನಗದು ವಶಕ್ಕೆ ಪಡೆಯಲಾಗಿದೆ.
ಮಲವಗೊಪ್ಪದ ರಾಮಮಂದಿರ ಹಿಂಭಾಗ ಓ.ಸಿ. ಬರೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಪೊಲೀಸರನ್ನು ಕಂಡು ಓ.ಸಿ. ಬರೆಸುತ್ತಿದ್ದವರು ಪರಾರಿಯಾಗಿದ್ದಾರೆ. ಓ.ಸಿ. ಬರೆಯುತ್ತಿದ್ದ ಸಂಪತ್ ಕುಮಾರ್ (51) ಎಂಬಾತನನ್ನು ಬಂಧಿಸಲಾಗಿದೆ. ಈತನ ಬಳಿ ಇದ್ದ ನಗದು, ಓ.ಸಿ. ಬರೆಸಲು ಇದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
shimoga, police | About Shivamogga Live
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200