ಶಿವಮೊಗ್ಗದ ಮಿಷನ್ ಕಾಂಪೌಂಡ್’ನಲ್ಲಿ ಪೊಲೀಸರ ದಾಳಿ, ಮೂವರು ಅರೆಸ್ಟ್

 ಶಿವಮೊಗ್ಗ  LIVE 

SHIVAMOGGA LIVE NEWS | 10 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಮಿಷನ್ ಕಾಂಪೌಂಡ್ ಪಕ್ಕದ ಖಾಲಿ ಜಾಗದಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮೂವರನ್ನು ಬಂಧಿಸಲಾಗಿದ್ದು, 90 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.

Shimoga Nanjappa Hospital

ಸಚಿನ್ ಅಲಿಯಾಸ್ ಶ್ಯಾಡೋ (26), ಸಂಜಯ್ (22), ಅರ್ಬಾಜ್ ಷರೀಫ್ (19) ಬಂಧಿತರು. ಸಂತ ಥಾಮಸ್ ಭವನದ ಪಕ್ಕದ ಖಾಲಿ ಜಾಗದಲ್ಲಿ ಈ ಮೂವರು ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಹೇಗಾಯ್ತು ದಾಳಿ?

ಬಂಧಿತರು ಪ್ಲಾಸ್ಟಿಕ್ ಕವರ್’ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು. ಮಾಹಿತಿ ಲಭ್ಯವಾಗುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ಲಾಸ್ಟಿಕ್ ಕವರ್ ಪರಿಶೀಲಿಸಿದಾಗ ಗಾಂಜಾ ಇರುವುದು ಖಚಿತವಾಗಿದೆ. ಒಂದು ಕೆ.ಜಿ.ಗೂ ಹೆಚ್ಚು ಗಾಂಜಾ ಸಿಕ್ಕಿದೆ.

ಆಂಧ್ರ ಪ್ರದೇಶದಿಂದ ಗಾಂಜಾ ತರಿಸಿಕೊಂಡು ಇಲ್ಲಿ ಮಾರಾಟ ಮಾಡುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮೂವರನ್ನು ಬಂಧಿಸಲಾಗಿದೆ. ಗಾಂಜಾದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ದೊಡ್ಡಪೇಟೆ ಠಾಣೆ ಪಿಎಸ್ಐ ಸತೀಶ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡಸಲಾಯಿತು. ಸಿಬ್ಬಂದಿ ಮಂಜುನಾಥ್, ಪ್ರವೀಣ್, ಶಶಿಧರ, ಗುರುನಾಯ್ಕ, ಶಿವಮೊಗ್ಗ ಗ್ರಾಮಾಂತರ ಠಾಣೆ ಸಿಬ್ಬಂದಿ ಶಿವಕುಮಾರ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment