ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಮೂಟೆ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ಆಹಾರ ಮತ್ತು ನಾಗರಿಕ ಪಡಿತರ ಸರಬರಾಜು ಇಲಾಖೆ ಅಧಿಕಾರಿಗಳು, ದೊಡ್ಡಪೇಟೆ ಠಾಣೆ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದೆ.
ಅಕ್ಕಿಯನ್ನು ಎಲ್ಲಿ ಸಂಗ್ರಹಿಸಿದ್ದರು?
ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಶಿವಮೊಗ್ಗದ ಎನ್.ಟಿ.ರಸ್ತೆಯ ಪಾಲಕ್ ಪ್ಯಾಲೆಸ್ ಶಾದಿಮಹಲ್ ಕಟ್ಟಡದಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಖಚಿತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ದಾಳಿ ನಡೆಸಲಾಗಿತ್ತು.

ದಾಳಿ ವೇಳೆ 320 ಮೂಟೆ ಅಕ್ಕಿ ಪತ್ತೆಯಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡ್ ಹೊಂದಿರುವವರಿಗೆ ವಿತರಿಸಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗುತ್ತಿತ್ತು. ಈ ಸಂಬಂಧ ಸಯ್ಯದ್ ಮುಜೀಬುಲ್ಲಾ, ಸಯ್ಯದ್ ಮುಯೀನ್ ಮತ್ತು ಪಾಲಕ್ ಪ್ಯಾಲೆಸ್ ಶಾದಿ ಮಹಲ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






