ಶಿವಮೊಗ್ಗದ ಓ.ಟಿ.ರಸ್ತೆಯಲ್ಲಿ ಬೊಲೆರೋ ಪಿಕಪ್ ವಾಹನದ ಮೇಲೆ ಪೊಲೀಸರ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 ಮಾರ್ಚ್ 2022

ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಬೊಲೇರೋ ಪಿಕಪ್ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರ ನೆರವಿನೊಂದಿಗೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರದ 3ನೇ ತಿರುವಿನಲ್ಲಿ ದಾಳಿ ನಡೆಸಲಾಯಿತು.

ಹೇಗಾಯ್ತು ದಾಳಿ? ಎಷ್ಟು ಅಕ್ಕಿ ಸಿಕ್ತು?

ಬೊಲೆರೋ ಪಿಕಪ್ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕೊಂಡೊಯ್ಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಫುಡ್ ಇನ್ಸ್ ಪೆಕ್ಟರ್ ಮತ್ತು ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದರು.

ಆಜಾದ್ ನಗರದ ಬಳಿ ಬೊಲೆರೋ ಪಿಕಪ್ ವಾಹನ ಬರುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು, ಪೊಲೀಸರನ್ನು ಕಂಡ ಕೂಡಲೆ ಚಾಲಕ ಮತ್ತು ಪಕ್ಕದ ಸೀಟಿನಲ್ಲಿ ಕುಳಿತಿದ್ದವರು ವಾಹನ ನಿಲ್ಲಿಸಿ ಪರಾರಿಯಾಗಿದ್ದಾರೆ.

ವಾಹನದ ಪರಿಶೀಲನೆ ನಡೆಸಿದಾಗ 50 ಕೆ.ಜಿ. ತೂಕದ ಪ್ಲಾಸ್ಟಿಕ್ ಚೀಲದಲ್ಲಿ ಪಡಿತರ ಅಕ್ಕಿಯನ್ನು ತುಂಬಲಾಗಿತ್ತು. ಸುಮಾರು 80 ಪ್ಲಾಸ್ಟಿಕ್ ಚೀಲದಲ್ಲಿ ಅಕ್ಕಿ ತುಂಬಲಾಗಿತ್ತು. ಇದರ ಮೌಲ್ಯ ಸುಮಾರು 88 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಸಯ್ಯದ್ ಮುಜೀಬುಲ್ಲಾ, ಸಯ್ಯದ್ ಮುಯಿನ್ ಮತ್ತು ಬೊಲೆರೋ ಪಿಕಪ್ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರೋರಾತ್ರಿ 250 ಕೆ.ಜಿ. ಅಡಕೆ ನಾಪತ್ತೆ

Nanjappa Hospital Covid Care Center

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 2, 2022

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a Comment