ಶಿವಮೊಗ್ಗ ಲೈವ್.ಕಾಂ | SHIMOGA NEWS | 08 ಅಕ್ಟೋಬರ್ 2021
ಸವಳಂಗ ರಸ್ತೆಯಲ್ಲಿ ಓಸಿ ಜೂಜಾಟ ಆಡಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಆತನಿಂದ ಹಣ, ಓಸಿ ಆಟಕ್ಕೆ ಬಳಕೆ ಮಾಡಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಕಮಲಾ ನರ್ಸಿಂಗ್ ಹೋಂ ಬಳಿ ಜಯನಗರ ಠಾಣೆ ಪಿಎಸ್ಐ ರಾಹತ್ ಅಲಿ ನೇತೃತ್ವದ ತಂಡ ದಾಳಿ ನಡೆಸಿದೆ. ಗಿರೀಶ್ ಎಂಬಾತ ಓಸಿ ಆಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.
ಓಸಿ ಬರೆಯಲು ಬಳಸುತ್ತಿದ್ದ ಚೀಟಿ, 770 ರೂ. ನಗದನ್ನು ಗಿರೀಶನಿಂದ ವಶಕ್ಕೆ ಪಡೆಯಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200