ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 13 APRIL 2024

SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಪರಿಶೀಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ನಡೆಯಿತು ದಾಳಿ?

ಜಿಲ್ಲೆಯ ಎಲ್ಲೆ ತಾಲೂಕಿನ ಪೊಲೀಸ್‌ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ಬೆಳಗಿನ ಜಾವ ದಾಳಿ ನಡೆಸಲಾಯಿತು. ಶಿವಮೊಗ್ಗದ ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಎಂ.ಸುರೇಶ್‌, ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌, ಸಾಗರ ಡಿವೈಎಸ್‌ಪಿ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್‌, ಶಿಕಾರಿಪುರ ಡಿವೈಎಸ್‌ಪಿ ಕೇಶವ್‌, ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಠಾಣೆಗಳ ಇನ್ಸ್‌ಪೆಕ್ಟರ್‌, ಸಬ್‌ ಇನ್ಸ್‌ಪೆಕ್ಟರ್‌ಗಳು ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

Police raid on rowdy houses in Shimoga district

ಮನೆಗಳಲ್ಲಿ ತಪಾಸಣೆ, ಖಡಕ್‌ ವಾರ್ನಿಂಗ್‌

ದಾಳಿ ನಡೆಸಿದ ಪೊಲೀಸರು ಮಾದಕ ವಸ್ತುಗಳು, ಮಾರಕಾಸ್ತ್ರಗಳಿಗಾಗಿ ರೌಡಿಗಳ ಮನೆಗಳಲ್ಲಿ ತಪಾಸಣೆ ನಡೆಸಿದರು. ಅಲ್ಲದೆ ರೌಡಿಗಳು ಪ್ರಸ್ತುವ ನಿರ್ವಹಿಸುತ್ತಿರುವ ಕೆಲಸ, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಯೆ ಎಂದು ವಿಚಾರಣೆ ನಡೆಸಿದರು. ಲೋಕಸಭೆ ಚುನಾವಣೆ ಸಂದರ್ಭ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಬಳಿ ನಿಷೇಧಾಜ್ಞೆ, ವಾಹನ ಸಂಚಾರಕ್ಕೂ ನಿರ್ಬಂಧ, ಏ.19ರವರೆಗೆ ಇದೇ ಸ್ಥಿತಿ

Leave a Comment