ಮನೆ ಮೇಲೆ ಪೊಲೀಸರ ದಾಳಿ, ಹನ್ನೊಂದು ಮಂದಿ ವಿರುದ್ಧ ಕೇಸ್, ಮೊಬೈಲ್, ನಗದು ವಶಕ್ಕೆ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 ಅಕ್ಟೋಬರ್ 2021

ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಹನ್ನೊಂದು ಜನರ ವಿರುದ್ಧ ಪ್ರಕರಣ ದಾಖಲು ಮಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಪಿ ಅಂಡ್ ಟಿ ಕಾಲೋನಿಯ ಮನೆಯೊಂದರ ಮೇಲೆ ವಿನೋಬನಗರ ಠಾಣೆ ಪಿಎಸ್ಐ ಮಂಜುನಾಥ ಕುರಿ ನೇತೃತ್ವದ ತಂಡ ದಾಳಿ ನಡೆಸಿದೆ.

ಮನೆಯಲ್ಲಿ ಅಂದರ್ ಬಾಹರ್ ಆಟವಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ವಿನಾಯಕ, ವಿಜಯ ನಾಯ್ಕ್, ಪ್ರದೀಪ್, ನವೀನ್, ರಮೇಶ್, ದುರ್ಗಪ್ಪ, ನಾಗರಾಜ್, ಗಿರೀಶ್, ಲೋಕೇಶ್, ಮಂಜುನಾಥ್, ಚಂದ್ರು ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

LifeSpring%2BKan%2B02

ದಾಳಿ ವೇಳೆ ಎಂಟು ಮೊಬೈಲ್, ಇಸ್ಪೀಟ್ ಎಲೆಗಳು, 42,560 ರೂ. ನಗದು ವಶಕ್ಕೆ ಪಡೆಯಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1632381439867456 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment