ತುಮಿಳುನಾಡಿನಿಂದ ಬಂದ ಲಾರಿ ಮೇಲೆ ಶಿವಮೊಗ್ಗ DySP ನೇತೃತ್ವದಲ್ಲಿ ದಾಳಿ, ಲಕ್ಷ ಲಕ್ಷದ ವಸ್ತುಗಳು ಸೀಜ್‌

ಶಿವಮೊಗ್ಗ
LIVE

ಶಿವಮೊಗ್ಗ: ಸಾರಿಗೆ ಅಧಿಕಾರಿಗಳಿಂದ ಪರವಾನಗಿ ಪಡೆಯದೆ, ಸುರಕ್ಷಿತ ಕ್ರಮ ಕೈಗೊಳ್ಳದೆ ಪಟಾಕಿ ಸಾಗಿಸುತ್ತಿದ್ದ ಲಾರಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ₹4,15,741 ಮೌಲ್ಯದ ಪಟಾಕಿ ಜಫ್ತಿ ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತಮಿಳುನಾಡಿನ ಶಿವಾಕಾಶಿಯಿಂದ ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗೋಡೋನ್‌ಗಳಿಗೆ ಪಟಾಕಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಸಂಜೀವ್‌ ಕುಮಾರ್‌ ನೇತೃತ್ವದಲ್ಲಿ ವಿರೂಪಿನಕೊಪ್ಪ ಬಳಿ ದಾಳಿ ನಡೆಸಿದ ಪೊಲೀಸರು, ದಾಖಲೆಗಳ ಪರಿಶೀಲನೆ ನಡೆಸಿದರು. ಸ್ಪೋಟಕ ವಸ್ತುಗಳ ಸಾಗಣೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲ. ಲಾರಿಯಲ್ಲಿ ಅಗ್ನಿ ನಿರೋಧಕ ವಸ್ತುಗಳು ಇಲ್ಲದಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Police-Van-in-Shimoga-City

ಇದನ್ನೂ ಓದಿ » ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆ, ಭದ್ರಾ ನಾಲೆಯಲ್ಲಿ ಶೋಧ ಕಾರ್ಯಾಚರಣೆ

ಘಟನೆ ಸಂಬಂಧ ಚಾಲಕ ಇಬ್ರಾಹಿಂ ಸಾಬ್‌, ಲಾರಿ ಮಾಲೀಕ, ಪಟಾಕಿ ರವಾನಿಸಿದ ಸಂಸ್ಥೆ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು ಮಾಡಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment