SHIVAMOGGA LIVE NEWS | 10 AUGUST 2023
THIRTHAHALLI : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಇದನ್ನೂ ಓದಿ – ನೆಹರು ರಸ್ತೆಯಲ್ಲಿ ಸರಣಿ ಕಳ್ಳತನ, ಬ್ರಾಂಡೆಡ್ ಶೂ, ಚಪ್ಪಲಿ ಹೊತ್ತೊಯ್ದ ಖದೀಮರು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ (34) ಮತ್ತು ಕಾರ್ತಿಕ್ (29) ಎಂಬುವವರನ್ನು ಬಂಧಿಸಲಾಗಿದೆ. ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಇನ್ಸ್‌ಪೆಕ್ಟರ್ ಅಶ್ವಥ್ ಗೌಡ, ಸಬ್ ಇನ್ಸ್‌ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.