ಗೋಪಾಳ ಸಮೀಪ ವಾಹನದ ಮೇಲೆ ಪೊಲೀಸ್ ದಾಳಿ, ಖದೀಮರು ಎಸ್ಕೇಪ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ದನಗಳ ಕಳ್ಳತನ ಮಾಡುತ್ತಿದ್ದವರು ವಾಹನದಿಂದ ಇಳಿದು ಪರಾರಿಯಾಗಿದ್ದಾರೆ.

ಶಿವಮೊಗ್ಗದ ಅನುಪಿನಕಟ್ಟೆ ಮುಖ್ಯರಸ್ತೆಯ ವಿನಾಯಕ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಟಾಟಾ ಏಸ್‍ ವಾಹನದಲ್ಲಿ ಗೋವುಗಳ ಕಳ್ಳ ಸಾಗಣೆ ಮಾಡಲಾಗುತ್ತಿತ್ತು. ಪುರದಾಳು – ಅನುಪಿನಕಟ್ಟೆ ಮಾರ್ಗವಾಗಿ ವಾಹನ ಬರುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ವಿನಾಯಕ ಸರ್ಕಲ್‍ ಬಳಿಕ ಪೊಲೀಸರು ದಾಳಿ ಮಾಡಿದ್ದಾರೆ.

ವಾಹನ ಬಿಟ್ಟು ಪರಾರಿಯಾದರು

ಟಾಟಾ ಏಸ್‍ ವಾಹನ ಬರುತ್ತಿದ್ದಂತೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ಮಾಡಿದ್ದು ಪೊಲೀಸರು ಎಂದು ಖಚಿತವಾಗುತ್ತಿದ್ದಂತೆ ಕಳ್ಳರು ವಾಹನವನ್ನು ನಿಲ್ಲಿಸಿ, ಪರಾರಿಯಾಗಿದ್ದಾರೆ. ವಾಹನದಲ್ಲಿ ಇಬ್ಬರು ಇದ್ದರು ಎಂದು ತಿಳಿದು ಬಂದಿದೆ. ಟಾಟಾ ಏಸ್‍ನಲ್ಲಿ ನಾಲ್ಕು ಗಿಡ್ಡ ತಳಿಯ ಹಸುಗಳಿದ್ದವು.

ವಾಹನ, ಗೋವುಗಳು ವಶಕ್ಕೆ

ಪೊಲೀಸರು ಟಾಟಾ ಏಸ್‍ ವಾಹನ ಮತ್ತು ಗೋವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗೋವುಗಳ ಕಳುವು ಮಾಡುತ್ತಿದ್ದವರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment