ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗದ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂಗಡಿಗಳಿಗೆ ಬೀಗ ಹಾಕಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನಷ್ಟು ಕಡೆಗಳಲ್ಲಿ ಪೊಲೀಸರು ದಾಳಿ ನಡೆಸುವ ಸಾಧ್ಯತೆ ಇದೆ.

ಎಲ್ಲೆಲ್ಲಿ ದಾಳಿ ನಡೆಸಲಾಗಿದೆ?
ಶಿವಮೊಗ್ಗದ ಇಲಿಯಾಸ್ ನಗರದಲ್ಲಿದ್ದ ಕಸಾಯಿ ಖಾನೆ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಟಿಪ್ಪು ನಗರ ಮತ್ತು ಜೆಪಿ ನಗರದಲ್ಲಿ ತುಂಗಾ ನಗರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಮೂರು ಕಡೆ ದಾಳಿ ನಡೆಸಿ, ಕಸಾಯಿ ಖಾನೆಗಳನ್ನು ಬಂದ್ ಮಾಡಿಸಿದ್ದಾರೆ.
ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆರು ಮಂದಿ ವಿರುದ್ಧ ನಾಲ್ಕು ಪ್ರಕರಣ ದಾಖಲು ಮಾಡಲಾಗಿದೆ. ಇನ್ನು, ದಾಳಿ ವೇಳೆ ಕಳವು ಮಾಡಿ ತಂದಿದ್ದ 19 ಹಸುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಮತ್ತು ತುಂಗಾ ನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇನ್ನು, ಪೊಲೀಸರು ದಾಳಿ ನಡೆಸುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗದ ವಿವಿಧೆಡೆ ಇದ್ದ ಕಸಾಯಿ ಖಾನೆಗಳು ಬಂದ್ ಆಗಿವೆ ಎಂದು ಹೇಳಲಾಗುತ್ತಿದೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






