ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಓಸಿ ಬಿಡ್ಡರ್’ಗಳು, ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ದಾಳಿ ವೇಳೆ ಓಸಿ ಆಡಿಸಲು ಬಳಕೆ ಮಾಡುತ್ತಿದ್ದ ಹಣ, ಚೀಟಿಗಳು, ಅಕ್ರಮವಾಗಿ ಮದ್ಯ ಮಾರಾಟಗಾರರಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ವಿನೋಬನಗರದಲ್ಲಿ ಪೊಲೀಸ್ ದಾಳಿ
ಶಿವಮೊಗ್ಗ ವಿನೋಬನಗರದ ಚಾಲುಕ್ಯ ಬಾರ್ ಸಮೀಪ ಓಸಿ ಆಡಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಓಸಿ ಆಡಿಸುತ್ತಿದ್ದ ಹೊಸಮನೆ ನಿವಾಸಿ ರಮೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನಿಂದ 1550 ರೂ. ನಗದು, ಓಸಿ ಆಡಿಸಲು ಬಳಸಿದ್ದ ಚೀಟಿಗಳನ್ನು ವಶಕ್ಕೆ ಪಡೆಯಲಾಗಿದ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟೋ ಕಾಂಪ್ಲೆಕ್ಸ್’ನಲ್ಲಿ ಓಸಿ
ಆಟೋ ಕಾಂಪ್ಲೆಕ್ಸ್’ನ ಶರಾವತಿ ಚಾನಲ್ ಏರಿಯಾದ ಬಳಿ ವ್ಯಕ್ತಿಯೊಬ್ಬ ಓಸಿ ಆಡಿಸುತ್ತಿದ್ದ. ಪೊಲೀಸರು ದಾಳಿ ನಡೆಸಿ ರಕ್ಷಿತ್ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ 1440 ರೂ. ನಗದು, ಓಸಿ ಆಡಿಸಲು ಬಳಸಿದ್ದ ಚೀಟಿಗಳನ್ನು ವಶಕ್ಕೆ ಪಡೆಯಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ
ಬುಳ್ಳಾಪುರ ಬಸ್ ನಿಲ್ದಾಣದ ಮುಂದಿನ ಶೆಡ್’ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡು ಶೆಡ್ ಬಳಿ ಇದ್ದವರು ಪರಾರಿಯಾಗಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಚನ್ನಬಸಮ್ಮ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. 470 ರೂ. ಮೌಲ್ಯದ ಮದ್ಯದ ಪೌಚ್’ಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಾಗಿದೆ.
ಮನೆ ಬಳಿ ಅಕ್ರಮವಾಗಿ ಮದ್ಯ ಮಾರಾಟ
ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾನೇಶ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. 370 ರೂ. ಮೌಲ್ಯದ ಮದ್ಯದ ಪೌಚ್’ಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಲಿನ ಬೇಡರಹೊಸಳ್ಳಿಯಲ್ಲಿ ದಾಳಿ
ಮೇಲಿನ ಬೇಡರಹೊಸಳ್ಳಿ ಗ್ರಾಮದಲ್ಲೂ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮವಾಗಿಮದ್ಯ ಮಾರಾಟ ಸಂಬಂಧ ರವಿಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬಸ್ ನಿಲ್ದಾಣದ ಪಕ್ಕದಲ್ಲಿ ಅಕ್ರಮವಾಗಿ ಮದ್ಯೆ ಮಾರಾಟ ಮಾಡುತ್ತಿದ್ದ ಸಂಬಂಧ ದಾಳಿ ನಡೆಸಲಾಗಿದೆ. 421 ರೂ. ಮೌಲ್ಯದ ಮದ್ಯದ ಪೌಚ್’ಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200