ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲೆಯ ವಿವಿಧೆಡೆ ರೌಡಿಶೀಟರ್ಗಳ ಮನೆಗಳ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ದಾಳಿ ನಡೆಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
241 ರೌಡಿಗಳ ಮನೆ ಬಾಗಿಲಿಗೆ ಪೊಲೀಸ್
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಸೇರಿದಂತೆ 7 ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳ ಮೂಲಕ ದಾಳಿ ನಡೆಸಲಾಯಿತು. ಒಟ್ಟು 241 ರೌಡಿಗಳ ಮನೆಗಳ ಬಾಗಿಲು ಬಡಿದ ಪೊಲೀಸರು ಹಬ್ಬಗಳ ವೇಳೆಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ನೇತೃತ್ವದಲ್ಲಿ, ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಎಂ.ಸುರೇಶ್, ಭದ್ರಾವತಿ ಉಪ ವಿಭಾಗದಲ್ಲಿ ಪೊಲೀಸ್ ಉಪಾಧೀಕ್ಷಕ ನಾಗರಾಜ್, ಸಾಗರ ಉಪ ವಿಭಾಗದಲ್ಲಿ ಪೊಲೀಸ್ ಉಪಾಧೀಕ್ಷಕ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ, ಶಿಕಾರಿಪುರ ಉಪ ವಿಭಾಗದಲ್ಲಿ ಡಿವೈಎಸ್ಪಿ ಶಿವಾನಂದ್ ಮದರಖಂಡಿ ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಒಳಗೊಂಡ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿದವು.
ಎಲ್ಲೆಲ್ಲಿ ಎಷ್ಟು ಕಡೆ ದಾಳಿ?
ಶಿವಮೊಗ್ಗ ಎ ಉಪ ವಿಭಾಗದಲ್ಲಿ 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 38, ಭದ್ರಾವತಿ ಉಪ ವಿಭಾಗದಲ್ಲಿ 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿಭಾಗದಲ್ಲಿ 44 ಸೇರಿ ಜಿಲ್ಲೆಯಾದ್ಯಂತ ಒಟ್ಟು 241 ರೌಡಿ ಶೀಟರ್ಗಳ ಮನೆಗಳನ್ನು ತಪಾಸಣೆ ನಡೆಸಲಾಯಿತು.
ರೌಡಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು. ಇತ್ತೀಚಿನ ಅವರ ಕಾರ್ಯ ಚಟುವಟಿಕೆಯ ಮಾಹಿತಿಯನ್ನೂ ಪೊಲೀಸರು ಪಡೆದುಕೊಂಡರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಚಕ್ರದ ಮೇಲೆ ಮೂತ್ರ ವಿಸರ್ಜಿಸಿದ ಬೀದಿ ನಾಯಿ, ಕೈ ಕೈ ಮಿಲಾಯಿಸಿದ ಎರಡು ಕುಟುಂಬ