ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIMOGA NEWS, 28 AUGUST 2024 : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಂಟ್ರಿಗೆ ಮೊದಲು ಶಿವಮೊಗ್ಗ ಪೊಲೀಸರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ (RAID) ನಡೆಸಿದ್ದಾರೆ. ಇವತ್ತು ಬೆಳ್ಳಂಬೆಳಗ್ಗೆ 120ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಜೈಲಿನ ಮೇಲೆ ದಾಳಿ ನಡೆಸಲಾಯಿತು. ಎಲ್ಲಾ ಬ್ಯಾರಕ್ ಮತ್ತು ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಬೀಡಿ, ಸಿಗರೇಟು ಹೊರತು ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

FILE PHOTO
ಇನ್ನು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ವರ್ಗಾಯಿಸಲಾಗುತ್ತಿದೆ. ಆರೋಪಿಗಳಾದ ಜಗದೀಶ್ ಮತ್ತು ಲಕ್ಷ್ಮಣನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಂಗಳೂರಿನಿಂದ ರವಾನಿಸಲಾಗಿದೆ. ಈ ಆರೋಪಿಗಳು ಬರುವ ಮುನ್ನವೆ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ ⇒ ಸೇತುವೆಯಿಂದ ಕೆಳಗೆ ಹಾರಿದ ಕಾರು | ಬಸ್ ಗುದ್ದಿ ಎಮ್ಮೆಗಳು ಸಾವು – 3 ಫಟಾಫಟ್ ನ್ಯೂಸ್






