ಶಂಕರಮಠ ರಸ್ತೆಯಲ್ಲಿ ಗೂಡ್ಸ್‌ ವಾಹನ ವಶಕ್ಕೆ ಪಡೆದ ಪೊಲೀಸ್‌, ಡ್ರೈವರ್‌ ವಿರುದ್ಧ ಕೇಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಜೆರ್ಸಿ ತಳಿಯ ಕರುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನವನ್ನು ತಡೆದ ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಗೂಡ್ಸ್‌ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ನಗರದ ಶಂಕರಮಠ ರಸ್ತೆಯಲ್ಲಿ ಘಟನೆ ನಡೆದಿದೆ.

ಶಂಕರಮಠ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಹೊನ್ನಾಳಿ ರಸ್ತೆ ಕಡೆಯಿಂದ ಬಂದ ಗೂಡ್ಸ್‌ ವಾಹನವನ್ನು ತಡೆದು ಪರಿಶೀಲಿಸಿದರು. ಅದರಲ್ಲಿ ಒಟ್ಟು 12 ಜೆರ್ಸಿ ತಳಿಯ ಹಸುಗೂಸುಗಳನ್ನು ಇಕ್ಕಟ್ಟಾದ ಜಾಗದಲ್ಲಿ ತುಂಬಿಕೊಂಡು ಸಾಗಿಸುತ್ತಿರುವುದು ಕಂಡುಬಂದಿತ್ತು. ಹಸುಗಳ ಸಾಗಣೆಗೆ ಯಾವುದೇ ದಾಖಲೆ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಪೊಲೀಸರು ವಾಹನವನ್ನು ವಶಕ್ಕೆ ಪಡೆದು, ಗೋವುಗಳನ್ನು ಮಹಾವೀರ ಗೋಶಾಲೆಗೆ ರವಾನಿಸಿದ್ದಾರೆ. ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kote Police station building