ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ : ಪಿಸ್ತೂಲ್ ಮತ್ತು ಡ್ರಾಗರ್‌ನಿಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗಂಡು ಹಾರಿಸಿದ್ದಾರೆ. ನ್ಯೂ ಟೌನ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಬಂದೂಕಿನಿಂದ ಹಾರಿದ ಗುಂಡು ಆರೋಪಿ ನಸ್ರು ಅಲಿಯಾಸ್ ನಸ್ರುಲ್ಲಾ ಎಂಬಾತನ ಎಡಗಾಲು ಸೀಳಿದೆ.
ಪ್ರಕರಣವೊಂದರಲ್ಲಿ ಪರಾರಿಯಾಗಿದ್ದ ನಸ್ರುಲ್ಲಾನನ್ನು ಬಂಧಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ನಸ್ರು ಇರುವ ಜಾಗಕ್ಕೆ ಪೊಲೀಸರು ತೆರಳಿದಾಗ ಆತ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಪಿಸ್ತೂಲು, ಡ್ರ್ಯಾಗರ್‌ನಿಂದ ದಾಳಿಗೆ ಯತ್ನ
ಓಲ್ಡ್ ಟೌನ್ ಠಾಣೆ ಪಿಎಸ್‌ಐ ಚಂದ್ರಶೇಖರ್ ಸೋಮವಾರ ದಾಳಿ ನಡೆಸಿ 1.4 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ನಸ್ರು ಅಲಿಯಾಸ್ ನಸ್ರುಲ್ಲಾ ಪರಾರಿಯಾಗಿದ್ದ. ಇವತ್ತು ಈತನ ಬಂಧನಕ್ಕೆ ತೆರಳಿದಾಗ ಕಂಟ್ರಿ ಪಿಸ್ತೂಲ್ ಮತ್ತು ಡ್ರ್ಯಾಗರ್‌ನಿಂದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಸ್ರುಲ್ಲಾ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಈತ ಭದ್ರಾವತಿಯ ಅನ್ವರ್ ಕಾಲೋನಿಯ ನಿವಾಸಿ. ಈತನ ವಿರುದ್ಧ ಐದು ಪ್ರಕರಣಗಳಿವೆ.
ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ನಸ್ರು ಬಳಿ ಇದ್ದ ಕಂಟ್ರಿ ಪಿಸ್ತೂಲ್ ಮತ್ತು ಡ್ರ್ಯಾಗರ್ ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ ಮುಂದುವರಿಕೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





