ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ರೌಡಿಶೀಟರ್ ನರಸಿಂಹ ಭೀಕರ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮಹಜರು ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಮುಖ ಆರೋಪಿ, ರೌಡಿಶೀಟರ್ ಮಧು ಅಲಿಯಾಸ್ ಹನುಮಂತು ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಗಾಂಧಿ ಬಜಾರ್‌ನ ಲಷ್ಕರ್ ಮೊಹಲ್ಲಾ ಬಳಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಜೂನ್ 12ರಂದು ಇಸ್ಪೀಟ್ ಆಟವಾಡಿಸುತ್ತಿದ್ದ ರೌಡಿಶೀಟರ್ ನರಸಿಂಹನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂಬು ಅಲಿಯಾಸ್ ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದರು.‌

Rowdysheeter-Madhu-Admitted-to-Mc-Gann-Hospital.

ಮಜಹರ್‌ ವೇಳೆ ತಪ್ಪಿಸಿಕೊಳ್ಳಲು ಯತ್ನ

ಭಾನುವಾರ ಮುಂಜಾನೆ ಆರೋಪಿಗಳನ್ನು ಮಹಜರು ನಡೆಸಲು ಹೊಳೆಬೆನವಳ್ಳಿಗೆ ಕರೆದೊಯ್ದಾಗ, ರೌಡಿಶೀಟರ್ ಮಧು ತಪ್ಪಿಸಿಕೊಳ್ಳುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಪೊಲೀಸರು ಎಚ್ಚರಿಕೆ ನೀಡಿದರೂ ಕೇಳದಿದ್ದಾಗ, ಇನ್ಸ್‌ಪೆಕ್ಟರ್‌ ಹರೀಶ್ ಪಟೇಲ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಆರೋಪಿ ಮಧುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲ್ಲೆಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.