BREAKING NEWS | ಶಿವಮೊಗ್ಗದಲ್ಲಿ ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 24 OCTOBER 2024 : ಸಂಚಾರ ಠಾಣೆ ಪೊಲೀಸ್‌ (Police) ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್‌ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಾಹನ ತಡೆದು ತಪಾಸಣೆಗೆ ಮುಂದಾದಾಗ ಘಟನೆ ನಡೆದಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಇಂದು ಮಧ್ಯಾಹ್ನ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ.

ಬಾನೆಟ್‌ ಮೇಲೆ ಪೊಲೀಸ್‌

ಬಿ.ಹೆಚ್.ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್‌ ಸಿಬ್ಬಂದಿ ಕೂಡಲೆ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್‌ ಮೇಲೆ ಹತ್ತಿದ್ದಾರೆ.

Police-on-car-bonnet-near-sahyadri-college

ಸ್ವಲ್ಪ ದೂರ ಹೋದ ಕಾರು

ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್‌ ಪೊಲೀಸ್‌ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ » ಬಸ್‌ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment