ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 24 OCTOBER 2024 : ಸಂಚಾರ ಠಾಣೆ ಪೊಲೀಸ್ (Police) ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಾಹನ ತಡೆದು ತಪಾಸಣೆಗೆ ಮುಂದಾದಾಗ ಘಟನೆ ನಡೆದಿದೆ.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಇಂದು ಮಧ್ಯಾಹ್ನ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ.
ಬಾನೆಟ್ ಮೇಲೆ ಪೊಲೀಸ್
ಬಿ.ಹೆಚ್.ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್ ಸಿಬ್ಬಂದಿ ಕೂಡಲೆ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್ ಮೇಲೆ ಹತ್ತಿದ್ದಾರೆ.

ಸ್ವಲ್ಪ ದೂರ ಹೋದ ಕಾರು
ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ » ಬಸ್ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





