ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 19 AUGUST 2024 : ಬೈಕ್ ಡಿಕ್ಕಿಯಾಗಿ (MISHAP) ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆತನ ಗುರುತು ತಿಳಿಯದ ಹಿನ್ನೆಲೆ ವಾರಸುದಾರರ ಪತ್ತೆಗೆ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ರಸ್ತೆ ದಾಟುತ್ತಿದ್ದವನಿಗೆ ಬೈಕ್ ಡಿಕ್ಕಿ
ಸಾಗರ ರಸ್ತೆಯನ್ನು ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗ ಕಡೆಯಿಂದ ವೇಗವಾಗಿ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಮಹೇಂದ್ರ ಶೋ ರೂಂ ಮುಂಭಾಗ ಆ.17ರ ರಾತ್ರಿ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕಿನಲ್ಲಿದ್ದ ಪವನ್ ಮತ್ತು ಯಶವಂತ್ ಎಂಬುವವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ರಸ್ತೆ ದಾಟುತ್ತಿದ್ದ ವ್ಯಕ್ತಿ ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೆ ಮೂರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು
ಡಿಕ್ಕಿಯಾದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಗುರುತು ಪತ್ತೆಯಾಗಿಲ್ಲ. ಈ ಹನ್ನೆಲೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಮೃತ ವ್ಯಕ್ತಿಯು ಸುಮಾರು 35 ವರ್ಷದವನಾಗಿದ್ದಾನೆ. 5 ಅಡಿ 8 ಇಂಚು ಎತ್ತರವಿದ್ದಾನೆ. ಬಲ ಮುಂಗೈನ ಒಳ ಭಾಗದಲ್ಲಿ ಅಮ್ಮ ಎಂಬ ಹಚ್ಚೆ ಗುರುತು ಇದೆ. ವಾರಸುದಾರರು ಇದ್ದಲ್ಲಿ ಕೂಡಲೆ 08182 261417 ಅಥವಾ 9480803346 ಮತ್ತು 9480803309 ಮೊಬೈಲ್ ನಂಬರ್ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ನೇಣು ಬಿಗಿದು ಆತ್ಮಹತ್ಯೆಯ ಸವಾಲೊಡ್ಡಿದ ಮುಖಂಡ