ಶಿವಮೊಗ್ಗ:ಬ್ಯಾಂಕ್ ಖಾತೆಗಳನ್ನು (mule bank account) ವಂಚಕರಿಗೆ ಒದಗಿಸುತ್ತಿದ್ದ ಆರೋಪದ ಹಿನ್ನೆಲೆ ಮತ್ತೆ ಇಬ್ಬರನ್ನು ಶಿವಮೊಗ್ಗದ ಸೈಬರ್ ಕ್ರೈಮ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುದೀಂದ್ರನಾಥ್ ಮತ್ತು ಆರೀಫ್ ಷರೀಫ್ ಎಂದು ಗುರುತಿಸಲಾಗಿದೆ.
ತನಿಖೆಯ ವೇಳೆ ಪತ್ತೆಯಾದ ಒಂದು ಬಾಡಿಗೆ ಬ್ಯಾಂಕ್ ಖಾತೆ ಮೂಲಕ ಬರೋಬ್ಬರಿ ₹2,12,26,896ಗು ಹೆಚ್ಚು ವಂಚನೆಯಾಗಿರುವುದು ಬೆಳಕಿಗೆ ಬಂದಿದೆ. ಈ ಖಾತೆಯು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದಾಖಲಾಗಿರುವ ಒಟ್ಟು ಐದು ಸೈಬರ್ ಪ್ರಕರಣಗಳಲ್ಲಿ ಬಳಕೆಯಾಗಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ಸಂಬಂಧ ಸಿ.ಇ.ಎನ್ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಮೊಬೈಲ್ನಲ್ಲಿ ಪ್ರಕರಣಕ್ಕೆ ಪೂರಕವಾದ ಡಿಜಿಟಲ್ ಸಾಕ್ಷ್ಯಗಳು ಲಭ್ಯವಾಗಿದ್ದು, ಇಬ್ಬರ ವಿರುದ್ಧ ಐಟಿ ಕಾಯ್ದೆ ಹಾಗೂ ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ