SHIVAMOGGA LIVE NEWS | 25 MARCH 2024
SHIMOGA : ಬಂಧನಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿಲಾಗಿದೆ. ಫಾರು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಫಾರು ಎಂಬಾತ ಮಲ್ಲಿಗೇನಹಳ್ಳಿ ಬಳಿ ಇರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆತನ ಬಂಧನಕ್ಕೆ ತೆರಳಿದ್ದ ವೇಳೆ ತುಂಗಾ ನಗರ ಠಾಣೆ ಸಿಬ್ಬಂದಿ ನಾಗಪ್ಪ ಅವರ ಮೇಲೆ ಆರೋಪಿ ಫಾರು ಚಾಕುವಿನಿಂದ ದಾಳಿ ನಡೆಸಿದ್ದ. ಆತ್ಮರಕ್ಷಣೆಗಾಗಿ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸತ್ಯನಾರಾಯಣ ಅವರು ಆರೋಪಿ ಫಾರು ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿದ್ದಾರೆ.
ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ನಾಗಪ್ಪ ಮತ್ತು ಆರೋಪಿ ಫಾರುನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಧಗಧಗ ಹೊತ್ತಿ ಉರಿದವು ವಸ್ತುಗಳು, ಬೆಂಕಿ ನಂದಿಸಿ ಮನೆ ಒಳಗೆ ಪರಿಶೀಲಿಸಿದಾಗ ಮಾಲೀಕನಿಗೆ ಕಾದಿತ್ತು ಆಘಾತ