ಲೋಕಾಯುಕ್ತ ದಾಳಿ, ಲಂಚದ ಹಣಕ್ಕೆ ಬೆಂಕಿ ಹಚ್ಚಿದ ಜನಪ್ರತಿನಿಧಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 21 NOVEMBER 2022

SAGARA | ಚಿಕನ್ ಅಂಗಡಿ ಮಾಲೀಕನಿಂದ ಲಂಚ (bribe) ಪಡೆಯುತ್ತಿದ್ದ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ.

Atiyas Motors Shimoga

ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಂಧಿತ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.

(bribe)

50 ಸಾವಿರ ರೂ. ಲಂಚದ ಹಣ

ಜೋಗ ಗ್ರಾಮದಲ್ಲಿ ಅಹ್ಮದ್ ಅಬ್ದುಲ್ ಬಾಕಿ ಸುಮಾರು 15 ವರ್ಷದಿಂದ ಚಿಕನ್ ಅಂಗಡಿ ನಡೆಸುತ್ತಿದ್ದಾರೆ. Harish Gowda Jog ಪರವಾನಗಿ ಪಡೆಯದೆ ಅಂಗಡಿ ನಡೆಸುತ್ತಿರುವುದರಿಂದ ತೆರವುಗೊಳಿಸುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಅಹ್ಮದ್ ಅಬ್ದುಲ್ ಅವರು ಪರವಾನಗಿಗೆ ಅರ್ಜಿ ಸಲ್ಲಿಸಿದ್ದರು. ಸಮಸ್ಯೆಯ ಕುರಿತು ತಮ್ಮ ವಾರ್ಡ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಳಿ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ | ನೆಹರು ಸ್ಟೇಡಿಯಂಗೆ ಬರುವವರಿಗೆ ಎಚ್ಚರಿಕೆ, ಮೊದಲ ಹಂತದಲ್ಲಿ ಬ್ಯಾನರ್ ಮೂಲಕ ವಾರ್ನಿಂಗ್

ಅಂಗಡಿ ನಡೆಸಲು ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು, ಪ್ರತಿ ತಿಂಗಳು 3 ಸಾವಿರ ರೂ. ಹಣ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡ ಸೂಚಿಸಿದ್ದಾರೆ. ಇದು ಕಷ್ಟವಾಗಲಿದೆ ಎಂದು ಅಹ್ಮದ್ ಅಬ್ದುಲ್ ತಿಳಿಸಿದ್ದಾರೆ. ಆಗ 50 ಸಾವಿರ ರೂ. ಕೊಡುವಂತೆ ಹರೀಶ್ ಗೌಡ ತಿಳಿಸಿದ್ದಾರೆ.

(bribe)

ಲೋಕಾಯುಕ್ತದಲ್ಲಿ ದೂರು ದಾಖಲು

ಲಂಚ ನೀಡಲು ನಿರಾಕರಿಸಿದ ಅಹ್ಮದ್ ಅಬ್ದುಲ್ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಇಂದು ಮಧ್ಯಾಹ್ನ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡ ಮನೆಗೆ ತೆರಳಿ 50 ಸಾವಿರ ರೂ. ಲಂಚದ ಹಣ ನೀಡಿದ್ದಾರೆ. ಹರೀಶ್ ಗೌಡ ಹಣ ಪಡೆಯುತ್ತಿದ್ದಂತೆ ಲೋಕಾಯುಕ್ತ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿದ್ದಾರೆ. ವಿಚಲಿತನಾದ ಪಟ್ಟಣ ಪಂಚಾಯಿತಿ ಸದಸ್ಯ ಹಣ ಸುಡಲು ಮುಂದಾಗಿದ್ದಾನೆ. ಮನೆಯಲ್ಲಿದ್ದ ಗ್ಯಾಸ್ ಸ್ಟೌ ಮೇಲೆ ಹಣ ಇಟ್ಟು ಬೆಂಕಿ ಹೊತ್ತಿಸಿದ್ದಾನೆ.

ಸದ್ಯ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡನನ್ನ ಬಂಧಿಸಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಡಿ.ವೈ.ಎಸ್.ಪಿ ಮೃತ್ಯುಂಜಯ.ಎನ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ಇನ್ಸ್ ಪೆಕ್ಟರ್ ರಾಧಾಕೃಷ್ಣ, ಇನ್ಸ್ ಪೆಕ್ಟರ್ ಹೆಚ್.ಎಂ.ಜಗನ್ನಾಥ, ಸಿಬ್ಬಂದಿ ಪ್ರಸನ್ನ, ಬಿ.ಲೋಕೇಶಪ್ಪ, ಮಹಾಂತೇಶ, ಚನ್ನೇಶ, ಪ್ರಶಾಂತ್ ಕುಮಾರ್, ಅರುಣ್ ಕುಮಾರ್, ಪುಟ್ಟಮ್ಮ, ಸಾವಿತ್ರಮ್ಮ, ಗಂಗಾಧರ, ತರುಣ್ ಕುಮಾರ್, ಪ್ರದೀಪ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment