ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಜುಲೈ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳಸಿಕೊಂಡು, ಗರ್ಭಿಯಾಣದ ಬಳಿಕ ಮದುವೆಯಾದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ, ದಂಡ ವಿಧಿಸಿದೆ. ಎಫ್.ಟಿ.ಎಸ್.ಸಿ ನ್ಯಾಯಾಲಯ ತೀರ್ಪು ನೀಡಿದೆ.
ಏನಿದು ಪ್ರಕರಣ? ಎಷ್ಟು ವರ್ಷ ಶಿಕ್ಷೆ?
ಶಿವಮೊಗ್ಗದ ಯಲವಟ್ಟಿ ತಾಂಡದ ಎಸ್.ಆರ್.ಬೀರೇಶ್ (30), ಅಪ್ರಾಪ್ತೆಯೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಆಕೆ ಗರ್ಭಿಣಿಯಾದಾಗ ಭದ್ರಾವತಿಯ ಚೌಡೇಶ್ವರಿ ದೇವಸ್ಥಾನದಲ್ಲಿ 2017ರ ಜೂನ್ 28ರಂದು ಮದುವೆಯಾಗಿದ್ದ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಕಾಲಂ 366, 376 (2) ಎನ್, ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ವಿಚಾರಣೆ ನಡೆಸಿದ ಎಪ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ದಯಾನಂದ ಅವರು ಬೀರೇಶ್‍ಗೆ ಹತ್ತು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200