ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOLALURU NEWS | 12 JUNE 2021
ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಮನನೊಂದು ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭೀಮವ್ವ (32) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ. ಶಿವಮೊಗ್ಗ ತಾಲೂಕು ಹೊಳಲೂರಿನ ಜನತಾ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ.
ಭೀಮವ್ವ ಅವರು ಪವನ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರು ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗೋಕಾಕ್‍ನಲ್ಲಿ ನೆಲೆಸಿದ್ದ ದಂಪತಿ ಇತ್ತೀಚೆಗೆ ಪವನ್ ತಾಯಿ ಅನಾರೋಗ್ಯಕ್ಕೀಡಾದ ಹಿನ್ನೆಲೆ ಹೊಳಲೂರಿಗೆ ಬಂದಿದ್ದರು.
ಕೌಟುಂಬಿಕ ಕಲಹ ಉಂಟಾಗಿ ಭೀಮವ್ವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]