ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ಸಂಪೂರ್ಣ ಜಖಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JUNE 2024

SAGARA : ಖಾಸಗಿ ಬಸ್‌ (Bus) ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಉಳ್ಳೂರು ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ಮತು ಸಾಗರ ಕಡೆಗೆ ತೆರಳುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೆ ಅವರನ್ನು ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್‌ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ಉದ್ಯಮಿಯ ವಾಟ್ಸಪ್‌ಗೆ ಬಂತು ಫೋಟೊ, ನೋಡ್ತಿದ್ದಂತೆ ಆಯ್ತು ಡಿಲೀಟ್‌, ನಂತರ ಬಂತು ‘ಬ್ರೇಕಿಂಗ್‌ ನ್ಯೂಸ್‌ʼ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment