ಖಾಸಗಿ ಬಸ್‌ ಪಲ್ಟಿ, ಹೊಳೆಹೊನ್ನೂರು ಸಮೀಪ ಗದ್ದೆಗೆ ಉರುಳಿದ ಬಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2023

HOLEHONNURU : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ (Bus) ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಜಮಾಯಿಸಿದ್ದರು.

ಹೊಳೆಹೊನ್ನೂರು ಸಮೀಪದ ಅರಹತೊಳಲು – ಕಲ್ಲಿಹಾಳ್‌ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರಿಗೆ ಮಾರಶೆಟ್ಟಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸರ್ಕಲ್‌ನಲ್ಲಿ ಬೃಹತ್‌ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2023

Leave a Comment