ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOSANAGARA NEWS, 12 NOVEMBER 2024 : ಲಾರಿ ಮತ್ತು ಬಸ್ (Bus) ಮಧ್ಯೆ ಅಪಾಘವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ಸಂಭವಿಸಿದೆ. ಖಾಸಗಿ ಬಸ್ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿತ್ತು. ಲಾರಿ ಹೊಸನಗರದಿಂದ ಹೋಗುತ್ತಿತ್ತು. ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ.
ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಪೈಕಿ ಹಲವರು ಗಾಯಗೊಂಡಿದ್ದಾರೆ. ಕೂಡಲೆ ಅವರಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ರಿಪ್ಪನ್‌ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422