ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯ ಖಾಸಗಿ ಫೋಟೊ ಅಪ್‌ಲೋಡ್, ಡಿಲೀಟ್‌ ಮಾಡಲು ಹಣಕ್ಕೆ ಡಿಮಾಂಡ್‌

 ಶಿವಮೊಗ್ಗ  LIVE 

ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪೋಸ್ಟ್ ಮಾಡಿ, ಅವುಗಳನ್ನು ಡಿಲೀಟ್ ಮಾಡಲು ಹಣಕ್ಕಾಗಿ ಬೇಡಿಕೆ ಇಡಲಾಗಿದೆ.

ಮಹಿಳೆಗೆ ಕಳೆದ ಎರಡು ವರ್ಷಗಳಿಂದ ವ್ಯಕ್ತಿಯೊಬ್ಬರ ಪರಿಚಯವಾಗಿತ್ತು. ಇಬ್ಬರು ಒಟ್ಟಿಗೆ ಇದ್ದ ಸಂದರ್ಭ ಆ ವ್ಯಕ್ತಿ ತನ್ನ ಮೊಬೈಲ್‌ನಲ್ಲಿ ಮಹಿಳೆಯ ಖಾಸಗಿ ಫೋಟೋಗಳನ್ನು ತೆಗೆದುಕೊಂಡಿದ್ದ. ನಂತರದ ಇಬ್ಬರ ನಡುವೆ ಜಗಳವಾಗಿದ್ದು, ಮಹಿಳೆಯು ಆತನಿಂದ ದೂರಾಗಿದ್ದರು. ಇದೇ ಕಾರಣಕ್ಕೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದೂರುದಾರರ ಖಾಸಗಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ವಾಟ್ಸ್‌ಆಪ್ ಮೂಲಕ ಮಹಿಳೆಗೆ ಫೋಟೋಗಳನ್ನು ಕಳುಹಿಸಿ, ಅವುಗಳನ್ನು ಡಿಲೀಟ್ ಮಾಡಲು ಹಣ ನೀಡಬೇಕು ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಸಿಇಎನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment