SHIMOGA NEWS, 17 SEPTEMBER 2024 : ಕೇಂದ್ರ ಕಾರಾಗೃಹದಲ್ಲಿ (JAIL) ಬೀಡಿಗಾಗಿ ಕೈದಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬಂಧಿಖಾನೆ ಸಿಬ್ಬಂದಿಗೆ ಜೀವ ಬೆದರಿಕೆ ಒಡ್ಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಹಿನ್ನೆಲೆ ಬಂಧಿಖಾನೆ ಡಿಐಜಿ ಸ್ಥಳಕ್ಕೆ ಭೇಟಿ ನೀಡಿದ್ದು, ಎರಡು ದಿನದಿಂದ ಮೊಕ್ಕಾಂ ಹೂಡಿದ್ದಾರೆ. ಇನ್ನೊಂದೆಡೆ ಕೇಂದ್ರ ಕಾರಾಗೃಹದ ಅಧೀಕ್ಷಕರ ಬದಲಾವಣೆ ಮಾಡಲಾಗಿದೆ.
ಸೆಂಟ್ರಲ್ ಜೈಲಿನಲ್ಲಿ ಆಗಿದ್ದೇನು?
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ಪ್ರಕರಣದ ಬೆನ್ನಿಗೆ ಶಿವಮೊಗ್ಗ ಜೈಲಿನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಜೈಲಿನೊಳಗೆ ಬೀಡಿ, ಸಿಗರೇಟು ಸರಬರಾಜು ಸಂಪೂರ್ಣ ನಿಷೇಧಿಸಲಾಯಿತು. ಇದರಿಂದ ಕೆರಳಿದ ಕೈದಿಗಳು ಬೀಡಿ, ಸಿಗರೇಟಿಗಾಗಿ ಆಗ್ರಹಿಸಿ ಧರಣಿ ನಡೆಸಿದ್ದರು. ಸೆ.12ರಂದು ಜೈಲಿನ ಕೆಲವು ಕೈದಿಗಳು ಬಂಧಿಖಾನೆ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಲಾಠಿಗಳನ್ನು ಕಸಿದುಕೊಂಡು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
» 21 ಕೈದಿಗಳ ವಿರುದ್ಧ ಪ್ರಕರಣ ದಾಖಲು
ಕಲ್ಲು ತೂರಾಟ, ಸಿಬ್ಬಂದಿಗೆ ಬೆದರಿಕೆ ಸಂಬಂಧ ರಾಜಶೇಖರ ರೆಡ್ಡಿ, ನೂರುಲ್ಲಾ, ಟಿಪ್ಪು, ಅಭಿಷೇಕ್ ಪಾಲನ್, ಟ್ವಿಸ್ಟ್ ಇಮ್ರಾನ್, ರಿಯಾಜ್ ಸೇರಿ ಒಟ್ಟು 21 ಕೈದಿಗಳ ವಿರುದ್ಧ ಜೈಲು ಅಧೀಕ್ಷಕಿ ಡಾ. ಆರ್.ಅನಿತಾ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೈಲಿನಲ್ಲಿ ಬಂಧಿಖಾನೆ ಡಿಐಜಿ ಮೊಕ್ಕಾಂ
ಇನ್ನು, ಬೀಡಿಗಾಗಿ ಕೈದಿಗಳ ಪ್ರತಿಭಟನೆ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಬಂಧಿಖಾನೆ ಡಿಐಜಿ ಕೆ.ಸಿ.ದಿವ್ಯಶ್ರೀ ಶಿವಮೊಗ್ಗ ಜೈಲಿಗೆ ಭೇಟಿ ನೀಡಿದ್ದಾರೆ. ಕಳೆದ ಎರಡು ದಿನದಿಂದ ಜೈಲಿನಲ್ಲಿ ಮೊಕ್ಕಾಂ ಹೂಡಿದ್ದಾರೆ. ಪರಿಸ್ಥಿತಿಯ ಅವಲೋಕ ನಡೆಸಿದ್ದಾರೆ.
» ಅಧೀಕ್ಷಕರು ದಿಢೀರ್ ಬದಲಾವಣೆ
ಮತ್ತೊಂದೆಡೆ ಜೈಲು ಅಧೀಕ್ಷಕರನ್ನು ದಿಢೀರ್ ಬದಲಾವಣೆ ಮಾಡಲಾಗಿದೆ. ಡಾ. ಅನಿತಾ ಅವರನ್ನು ಶಿವಮೊಗ್ಗ ಜೈಲು ಅಧೀಕ್ಷಕ ಹುದ್ದೆಯಿಂದ ಬದಲಾಯಿಸಲಾಗಿದೆ. ಆ ಜಾಗಕ್ಕೆ ಡಾ. ರಂಗನಾಥ್ ಅವರನ್ನು ನೇಮಿಸಲಾಗಿದೆ. ಡಾ. ರಂಗನಾಥ್ ಅವರು ಈ ಹಿಂದೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಆಗ ಕೈದಿಗಳ ಮನ ಪರಿವರ್ತನೆಗೆ ವಿವಿಧ ಕಾರ್ಯಕ್ರಮಗಳು, ಯೋಜನೆಗಳನ್ನು ರೂಪಿಸಿ ಹೆಸರುವಾಸಿಯಾಗಿದ್ದರು. ಇದೇ ಕಾರಣಕ್ಕೆ ಡಾ. ರಂಗನಾಥ್ ಅವರನ್ನೇ ಶಿವಮೊಗ್ಗ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ » ಹಿಂದು ಮಹಾಸಭಾ ಗಣಪತಿ, ಯಾವ ಮಾರ್ಗದಲ್ಲಿ ಸಾಗುತ್ತೆ ಮೆರವಣಿಗೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200