ಶಿವಮೊಗ್ಗ ಲೈವ್.ಕಾಂ | SORABA NEWS | 31 ಜುಲೈ 2021
ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸುಚಿತ್ರಾಗೆ, ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತಿತ್ತು. ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಆದರೆ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ ಎಂದು ಹೇಳಲಾಗುತ್ತಿದೆ.
ಕುಟುಂಬದವರು ಹೊಲಕ್ಕೆ ಹೋದ ಸಂದರ್ಭ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200