ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 FEBRUARY 2024
SHIKARIPURA : ಬಸ್ ಹತ್ತುವ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಪರ್ಸ್ ಕಳ್ಳತನ ಮಾಡಲಾಗಿದೆ. ಪರ್ಸ್ನಲ್ಲಿ ಸುಮಾರು 3.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಇತ್ತು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಶಿಕಾರಿಪುರದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದ ನಾಗರತ್ನಮ್ಮ ಶಿವಮೊಗ್ಗಕ್ಕೆ ಮರಳುತ್ತಿದ್ದರು. ಬಸ್ ಹತ್ತಿ ವ್ಯಾನಿಟಿ ಬ್ಯಾಗ್ ಗಮನಿಸಿದಾಗ ಜಿಪ್ ತೆರೆದಿತ್ತು. ಒಳಗೆ ಪರ್ಸ್ ಇರಲಿಲ್ಲ. ಪರ್ಸ್ನಲ್ಲಿ ಚಿನ್ನದ ಬಳೆ, ಕಿವಿಯೋಲೆಗಳು, ಸರ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಬಸ್ ಹತ್ತುವ ಸಂದರ್ಭ ಕಳ್ಳತನ ಮಾಡಿರುವ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ನಿಂದ ಪರ್ಸ್, ಚಿನ್ನಾಭರಣ ಕಳ್ಳತನ ಪ್ರಕರಣಗಳು ನಿರಂತರವಾಗಿ ನಡೆಯುತ್ತಿತ್ತು. ಸಿಸಿಟಿವಿ ಕ್ಯಾಮರಾ ಮತ್ತು ಭದ್ರತೆ ಹೆಚ್ಚಳ ಮಾಡಿದ್ದರಿಂದ ಕಳ್ಳತನ ಪ್ರಕರಣ ತಗ್ಗಿವೆ. ಈಗ ಶಿಕಾರಿಪುರ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದ್ದು ಮಹಿಳೆಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422