ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 16 JANUARY 2025
ಶಿವಮೊಗ್ಗ : KSRTC ಬಸ್‌ನಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ ಮುಂದುವರೆದಿದೆ. ಭದ್ರಾವತಿಗೆ ತೆರಳಲು ಬಸ್ ಹತ್ತಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬ್ಯಾಂಕ್ ದಾಖಲೆಗಳು ಮತ್ತು ನಗದು ಇದ್ದ ಪರ್ಸ್ ಕಳ್ಳತನ ಮಾಡಲಾಗಿದೆ.
ಭದ್ರಾವತಿಯ ಶಶಿರೇಖಾ ಅವರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್ ಕಳ್ಳತನ ಮಾಡಲಾಗಿದೆ. ರಿಪ್ಪನ್‌ಪೇಟೆಯ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಶಶಿರೇಖಾ ಅವರು ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ಬಸ್ ಹತ್ತುವಾಗ ಹೆಚ್ಚು ಜನ ದಟ್ಟಣೆ ಇತ್ತು. ಬಸ್ ಹತ್ತಿ ಟಿಕೆಟ್ ಮಾಡಿಸಲು ಆಧಾರ್ ಕಾರ್ಡ್ ತೆಗೆಯಲು ವ್ಯಾನಿಟಿ ಬ್ಯಾಗ್‌ಗೆ ಕೈ ಹಾಕಿದಾಗ ಪರ್ಸ್ ಕಳ್ಳತನವಾಗಿರುವುದು ಗೊತ್ತಾಗಿದೆ. ಪರ್ಸ್‌ನಲ್ಲಿ 60 ಸಾವಿರ ರೂ. ನಗದು, ವಿವಿಧ ಬ್ಯಾಂಕ್‌ಗಳ ಎಟಿಎಂ, ಚೆಕ್ ಪುಸ್ತಕಗಳು ಇದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ನ್ಯೂಸ್
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















