ಸಭೆ ಮುಗಿದ ಬಳಿಕ ಶಿಕ್ಷಕಿಗೆ ಕಾದಿತ್ತು ಆಘಾತ, ಸಂಜೆ ಬಂದ ಮೆಸೇಜ್‌ನಿಂದ ದಿಗ್ಭ್ರಮೆ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 DECEMBER 2024

ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್‌ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ.

ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್‌ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್‌ ನಾಪತ್ತೆಯಾಗಿತ್ತು. ಅದರಲ್ಲಿ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಎಟಿಎಂ ಕಾರ್ಡುಗಳು ಇದ್ದವು.

Kote Police station building

ಇದನ್ನೂ ಓದಿ » ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್‌, ತಪ್ಪಿದ ದೊಡ್ಡ ಅನಾಹುತ

ಅದೇ ದಿನ ಸಂಜೆ ಶಿಕ್ಷಕಿ ಅನ್ಸುತಾ ಸೀಕ್ವೇರಾ ಅವರ ಮೊಬೈಲ್‌ಗೆ ಹಣ ಡ್ರಾ ಆಗಿರುವ ಮೆಸೇಜ್‌ ಬಂದಿತ್ತು. ಕಳ್ಳತನ ಮಾಡಿದ್ದ ಎಟಿಎಂ ಕಾರ್ಡ್‌ ಬಳಸಿ ಒಟ್ಟು 36 ಸಾವಿರ ರೂ. ಹಣ ಡ್ರಾ ಮಾಡಲಾಗಿತ್ತು. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದಲ್ಲಿ ಅತಿ ದೊಡ್ಡ ಕಾರ್‌ ಎಕ್ಸ್‌ಚೇಂಜ್‌ ಮೇಳ

Shakti toyota

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 20, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment