ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 NOVEMBER 2024
ಹೊಸನಗರ : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣವೊಂದರ ಆರೋಪಿಯಿಂದ ಲಂಚ (Bribe) ಪಡೆಯುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎಪಿಪಿ ರವಿಯನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಕಟಣೆಯಲ್ಲಿ ಏನಿದೆ?
ಆರೋಪಿಗೆ ಪ್ರಕರಣವನ್ನು ರಾಜಿ ಮಾಡಿಕೊಳ್ಳುವಂತೆ ತಿಳಿಸಿದ್ದ ಎಪಿಪಿ ರವಿ, 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ರೂ. ಹಣ ಪಡೆದಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.29ರಂದು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದ್ದಾಗ ಸರ್ಕಾರಿ ಅಭಿಯೋಜಕರ ಕೊಠಡಿಯಲ್ಲಿ ಪುನಃ 3 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಎಪಿಪಿ ರವಿಯನ್ನು ಬಂಧಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಹೆಚ್.ಮಂಜುನಾಥ ಚೌದರಿ ನೇತೃತ್ವದಲ್ಲಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಲಾಯಿತು. ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಹೆಚ್.ಎಸ್ ಸುರೇಶ್, ಸಿಬ್ಬಂದಿ ಯೋಗೇಶ್, ಟೀಕಪ್ಪ, ಸುರೇಂದ್ರ, ಪ್ರಶಾಂತ್ ಕುಮಾರ್, ಚೆನ್ನೇಶ್, ಆದರ್ಶ್, ದೇವರಾಜ್, ಪ್ರಕಾಶ್ ಬಾರಿಮರದ, ಪುಟ್ಟಮ್ಮ.ಎನ್, ಅಂಜಲಿ, ಗಂಗಾಧರ, ಜಯಂತ್, ಗೋಪಿ, ತರುಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಐದು ವರ್ಷದ ಬಳಿಕ ಮತ್ತೆ ಸಹ್ಯಾದ್ರಿ ಉತ್ಸವ, ಏನೆಲ್ಲ ಸ್ಪರ್ಧೆ ಇರುತ್ತೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422