ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 NOVEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಅಕ್ರಮವಾಗಿ ಪಟಾಕಿ (Crackers) ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ಗಾಂಧಿ ಬಜಾರ್ನಲ್ಲಿ ಅಂಗಡಿಯೊಂದರ ಮೇಲೆ ದಾಳಿ ನಡೆಸಲಾಗಿದೆ. ಸಾವಿರಾರು ರೂ. ಮೌಲ್ಯದ ಪಟಾಕಿ ವಶಕ್ಕೆ ಪಡೆಯಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಗಾಂಧಿ ಬಜಾರ್ನ ಅಂಗಡಿಯೊಂದರಲ್ಲಿ ಅಕ್ರಮವಾಗಿ ಪಟಾಕಿ (Crackers) ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ದಾಳಿ ಮಾಡಲಾಯಿತು. ಅಂಗಡಿಯಲ್ಲಿ ಸಾವಿರಾರು ರೂ. ಮೌಲ್ಯದ ಪಟಾಕಿ ಪತ್ತೆಯಾಗಿದೆ. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದರೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಒಂದೇ ಕಡೆ ಪಟಾಕಿ ಮಾರಾಟ, ಈ ಬಾರಿ ಹೇಗಿದೆ ವ್ಯವಸ್ಥೆ?
ಬೆಂಗಳೂರಿನ ಆನೇಕಲ್ ಪಟಾಕಿ ದುರಂತದ ಹಿನ್ನೆಲೆ ಪಟಾಕಿ ಮಾರಾಟಕ್ಕೆ ಕಟ್ಟುನಿಟ್ಟು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗಿದ್ದು ನಗರದ ವಿವಿಧೆಡೆ ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಗಾಂಧಿ ಬಜಾರ್ನಲ್ಲಿ ದಾಳಿ ನಡೆಸಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಈ ವೇಳೆ ಹಾಜರಿದ್ದರು.