ತೋಟದ ಮನೆ ಮೇಲೆ ಶಿವಮೊಗ್ಗ ಪೊಲೀಸರ ದಾಳಿ, ಇಬ್ಬರು ಅರೆಸ್ಟ್, ಮೂವರು ಮಹಿಳೆಯರ ರಕ್ಷಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೋಟದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಅರೋಪದ ಹಿನ್ನೆಲೆ ಮಹಿಳಾ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂವರು ಮಹಿಳೆಯರ ರಕ್ಷಣೆ ಮಾಡಲಾಗಿದೆ.

ಶಂಕರ ಮತ್ತು ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ. ಬೇರೆ ಊರುಳಿಂದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಏನಿದು ಪ್ರಕರಣ?

ಮಾಲೀಕರಿಗೆ ಗೊತ್ತಾಗದ ಹಾಗೆ ಶಿವಮೊಗ್ಗದ ಸಮೀಪದ ತೋಟದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ತೋಟ ನೋಡಿಕೊಳ್ಳುತ್ತಿದ್ದವರು ಮಾಲೀಕರಿಗೆ ಗೊತ್ತಾಗದ ಹಾಗೆ ಕೃತ್ಯ ನಡೆಸುತ್ತಿದ್ದರು. ಕೆಲಸ ಹುಡುಕುತ್ತಿದ್ದ ಮಹಿಳೆಯರು, ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎಂದು ಎಫ್ಐಆರ್’ನಲ್ಲಿ ತಿಳಿಸಲಾಗಿದೆ.

ಪೊಲೀಸರ ದಾಳಿ ವೇಳೆ ತೋಟದ ಮನೆಯಲ್ಲಿ ಮೂವರು ಮಹಿಳೆಯರಿದ್ದರು. ಅವರನ್ನು ರಕ್ಷಣೆ ಮಾಡಲಾಗಿದೆ. ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಶಂಕರ ಮತ್ತು ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಮಹಿಳಾ ಠಾಣೆ ಇನ್ಸ್ ಪೆಕ್ಟರ್ ವೀರೇಶ್ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment