ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು, ಆರು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಖಚಿತ ಮಾಹಿತಿ ಮೇರೆಗೆ ಕೋಟೆ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್ ನೇತೃತ್ವದ ತಂಡ ಶಂಕರಮಠ ಸರ್ಕಲ್ ಬಳಿ ತಪಾಸಣೆ ನಡೆಸಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್‍ನಿಂದ ಬಿ.ಹೆಚ್.ರಸ್ತೆಗೆ ಬರುತ್ತಿದ್ದ ಮ್ಯಾಕ್ಸಿ ಟ್ರಕ್ ವಾಹನವನ್ನು ತಡೆದು ತಪಾಸಣೆ ನಡೆಸಿದೆ.
ವಾಹನದಲ್ಲಿ 2750 ಕೆ.ಜಿ.ಅಕ್ಕಿ ಇರುವುದು ಪತ್ತೆಯಾಗಿದೆ. ಅನ್ನ ಭಾಗ್ಯ ಯೋಜನೆಗೆ ಸೇರಿದ 68,750 ರೂ. ಮೌಲ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಮ್ಯಾಕ್ಸಿ ಟ್ರಕ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಬಳಿಕ ಚಾಲಕ, ವಾಹನದ ಮಾಲೀಕ, ಅಂಗಡಿಯೊಂದರ ಮಾಲೀಕ ಸೇರಿ ಆರು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















