ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JUNE 2024
SHIMOGA : ನಗರದ ಬೈಪಾಸ್ ರಸ್ತೆಯಲ್ಲಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ರಾಜಹಂಸ ಬಸ್ಸಿನ (Rajahamsa) ಕೆಳಗೆ ಸಿಲುಕಿ ಬೈಕ್ ಸವಾರ ಶ್ರೀರಾಮಪುರದ ಸಂತೋಷ್ (23) ನಜ್ಜುಗುಜ್ಜಾಗಿದ್ದ.
ರಾಜಹಂಸ ಬಸ್ಸು ಎಂಆರ್‌ಎಸ್ ಸರ್ಕಲ್‌ನಿಂದ ಬಸ್ ನಿಲ್ದಾಣದ ಕಡೆಗೆ ಸಾಗುತ್ತಿತ್ತು. ಈ ಸಂದರ್ಭ ಊರುಗಡೂರು ರಸ್ತೆಯಿಂದ ಬೈಕ್ ದಿಢೀರ್ ಎಂದು ಬಸ್ಸಿನ ಮುಂದೆ ಬಂದಿದೆ. ಬೈಕ್‌ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಬಸ್ ಚಾಲಕ ಯತ್ನಿದ್ದಾರೆ. ಆದರೆ ವೇಗವಾಗಿದ್ದ ಬೈಕ್ ಸಂಪೂರ್ಣವಾಗಿ ಬಸ್ಸಿನ ಮುಂಭಾಗಕ್ಕೆ ಬಂದಿತ್ತು.

ಬೈಕ್‌ಗೆ ಡಿಕ್ಕಿ ಆಗಿ ಬಸ್ ಡಿವೈಡರ್ ಹಾರಿ ನಿಂತಿತ್ತು. ರಾಜಹಂಸ ಬಸ್ಸಿನ ಅಡಿಗೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದ. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆಯ ತುರ್ತು ನಿಗಾ ಘಟಕದಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಶಾಕ್
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















