ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ಬೆದರಿಕೆ ಆರೋಪ, ಮಾಸ ಪತ್ರಿಕೆಯ ವರದಿಗಾರನ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022

ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ಆರೋಪ ಸಂಬಂಧ ಮಾಸ ಪತ್ರಿಕೆಯೊಂದರ ವರದಿಗಾರರೊಬ್ಬರನ್ನು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದರು.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಆರ್.ಟಿ.ಐ ಕಾರ್ಯಕರ್ತ, ಮಾಸ ಪತ್ರಿಕೆಯೊಂದರ ವರದಿಗಾರ ಪಿ.ಸಿ.ಜಯಣ್ಣನವರ್ ಬಂಧಿತರು. ಜಯಣ್ಣನವರ್ ಅವರು ನಿತ್ಯ ಕಚೇರಿಗೆ ಬಂದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ನೌಕರರಿಗೆ ಅವಹೇಳನಕಾರಿಯಾಗಿ ಮಾತನಾಡಿ, ಬೆದರಿಕೆ ಒಡ್ಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಮತ್ತು ಮಾಸ ಪತ್ರಿಕೆಯಲ್ಲಿ ವರದಿ ಪ್ರಕಟಿಸುತ್ತಿದ್ದಾರೆ ಎಂದು ದೂರು ನೀಡಲಾಗಿತ್ತು.

ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ.ಸಿ.ಜಯಣ್ಣನವರ್ ಅವರನ್ನು ಬಂಧಿಸಲಾಗಿದೆ.

ABOUT NEW DEC 2021 REPORT

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment