ವಾಕಿಂಗ್​​ಗೆ ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಶಿವಮೊಗ್ಗದ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ವಾಕಿಂಗ್‍ಗೆ ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತುಂಗಾ ನದಿ ಸೇತುವೆ ಬಳಿ ಅವರ ಮೃತದೇಹ ಪತ್ತೆಯಾಗಿದೆ.

ನಿವೃತ್ತ ಎಎಸ್‍ಐ ಮುಷ್ತಾಕ್ ಅಹಮದ್ (72) ಮೃತರು. ಇವತ್ತು ಬೆಳಗ್ಗೆ ವಾಕಿಂಗ್‍ಗೆ ತೆರಳಿದ್ದರು. ಆದರೆ ಬಹು ಹೊತ್ತಿನವರೆಗೆ ಹಿಂತಿರುಗಿರಲಿಲ್ಲ. ಆದ್ದರಿಂದ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Shivamogga Live Promotion

ಈ ವೇಳೆ ತುಂಗಾ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೂಡಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ಅದು ಮುಷ್ತಾಕ್ ಅಹಮದ್ ಅವರದ್ದು ಎಂದು ಖಚಿತವಾಗಿದೆ.

Nammur News For Website 2 1 1 1

ಮುಷ್ತಾಕ್ ಅಹಮದ್ ಅವರು ಮೂಲತಃ ಬೆಳಗಾವಿ ಜಿಲ್ಲೆಯವರು. ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ತಮ್ಮ ಪತ್ನಿಯ ಮನೆಯಲ್ಲಿ ವಾಸವಿದ್ದರು. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment