ರಸ್ತೆ ಬದಿ ಲಂಚ ಪಡೆಯುತ್ತಿದ್ದ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ, ಎಲ್ಲಿ? ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : ರೈತರೊಬ್ಬರಿಂದ ರಸ್ತೆ ಬದಿಯಲ್ಲಿ ನಿಂತು ಹಣ ಸ್ವೀಕರಿಸುತ್ತಿದ್ದ ರಾಜಸ್ವ ನಿರೀಕ್ಷಕ ಲೋಕಾಯುಕ್ತರಿಗೆ ರೆಡ್‌ ಹ್ಯಾಂಡ್‌ (Red Handed) ಆಗಿ ಸಿಕ್ಕಿಬಿದ್ದಿದ್ದಾನೆ. ಲಂಚ ಪಡೆಯುತ್ತಿದ್ದ ತಾಳಗುಪ್ಪ ಹೋಬಳಿಯ ರಾಜಸ್ವ ನಿರೀಕ್ಷಕ (ಆರ್.ಐ) ಮಂಜುನಾಥ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ

ತಾಳಗುಪ್ಪ ಹೋಬಳಿಯ ಮುಂಡಿಗೆಹಳ್ಳದ ಕೃಷ್ಣಮೂರ್ತಿ ಎಂಬುವವರ ಜಮೀನು ಸಮತಟ್ಟು ಮಾಡಲು ತಹಶೀಲ್ದಾರ್‌ ಅವರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅನುಮತಿ ಸಿಕ್ಕಿರಲಿಲ್ಲ. ಹಾಗಾಗಿ ಜಮೀನು ಸಮತಟ್ಟು ಮಾಡುವ ಕೆಲಸ ಮಾಡುತ್ತಿದ್ದರು. ಈ ಸಂದರ್ಭ ರಾಜಸ್ವ ನಿರೀಕ್ಷಕ ಕೃಷ್ಣಮೂರ್ತಿ ಸ್ಥಳಕ್ಕೆ ಆಗಮಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

Lokayukta-Raid-in-Sagara

ಮಾ.20ರಂದು ಫೋನ್‌ ಪೇ ಮೂಲಕ 2500 ರೂ., ಏಪ್ರಿಲ್‌ 2ರಂದು 500 ರೂ. ಲಂಚ ಪಡೆದಿದ್ದರು. ಪುನಃ 3 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇವತ್ತು ಸುಳ್ಳೂರು ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೃಷ್ಣಮೂರ್ತಿ ಅವರಿಂದ ಮಂಜುನಾಥ್‌ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ (Red Handed) ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Nirantara-Ladies-PG-Shimoga.

ಲೋಕಾಯುಕ್ತ ಉಪಾ‍ಧೀಕ್ಷಕ ಬಿ.ಪಿ.ಚಂದ್ರಶೇಖರ್‌ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟರ್‌ ವೀರಬಸಪ್ಪ ಎಲ್.ಕುಸಲಾಪುರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಸಿಬ್ಬಂದಿ ಟೀಕಪ್ಪ, ಮಂಜುನಾಥ್‌, ಸುರೇಂದ್ರ, ಯೋಗೇಶ್‌, ಪ್ರಶಾಂತ್‌ ಕುಮಾರ್‌, ಬಿ.ಟಿ.ಚನ್ನೇಶ್‌, ದೇವರಾಜ್‌, ಅರುಣ್‌ ಕುಮಾರ್‌, ಪ್ರಕಾಶ್‌ ಬಾರಿಮರದ, ಆದರ್ಶ, ಚಂದ್ರಿಬಾಯಿ, ಪ್ರದೀಪ್‌, ಗೋಪಿ, ಜಯಂತ್‌, ತರುಣ್‌ ಕುಮಾರ್‌, ಗಂಗಾಧರ್‌, ಆನಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 8, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment