ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 JUNE 2024
KUMSI : ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದು ಸವಾರ (Rider) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾರನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಮೈಸವಳ್ಳಿಯ ಸತೀಶ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಮಗು ಭರಣಿ (7) ಕಾಲಿಗೆ ಪೆಟ್ಟಾಗಿದೆ.
ಸತೀಶ್ ಅವರು ಸಂಬಂಧಿಯೊಬ್ಬರ ಮಗುವನ್ನು ಹಾರನಹಳ್ಳಿಗೆ ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮತ್ತೆ ಮೈಸವಳ್ಳಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ಸತೀಶ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಮಗು ಭರಣಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮಾತಿಗೆ ಮಾತು ಬೆಳೆದು ತಂದೆಯ ಹೊಟ್ಟೆಗೆ ಇರಿದು ಕೊಂದ ಅಪ್ರಾಪ್ತ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















