ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಡಿಸೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದಿಢೀರ್ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರಾವತಿಯ ಹೊಸಸಿದ್ಧಾಪುರ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಹೊಸಸಿದ್ಧಾಪುರದಲ್ಲಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಬಿಡಿಸಲು ಹೋದ ಸ್ಥಳೀಯರ ಮೇಲೂ ದಾಳಿ ಮಾಡಿದೆ.
ನಶೆಯಲ್ಲಿದ್ದವರಿಂದ ಏಕಾಏಕಿ ಅಟ್ಯಾಕ್
ರಾತ್ರಿ ಹೊಸ ಸಿದ್ಧಾಪುರದಲ್ಲಿ ಸುಮಾರು ಎಂಟು ಯುವಕರು ಏಕಾಏಕಿ ದಾಳಿ ನಡೆಸಿದ್ದಾರೆ. ದಾರಿಯಲ್ಲಿ ಸಿಕ್ಕವರ ಮೇಲೆ ಹಲ್ಲೆ ಮಾಡಿದ್ದಾರೆ. ವಿನೋದ್, ರಾಜೇಶ್ ಎಂಬ ಯುವಕರ ಮೇಲೆ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಲಾಗಿದೆ. ಮುಖದ ಮೇಲೆ ಹೊಡೆದು ಕಣ್ಣಿನ ಭಾಗಕ್ಕೆ ಗಾಯಗೊಳಿಸಲಾಗಿದೆ.
ಬಿಡಿಸಲು ಹೋದವರ ಮೇಲೂ ದಾಳಿ
ಯುವಕರ ಮೇಲೆ ದಾಳಿ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಜಗಳ ಬಿಡಿಸಲು ಮುಂದಾಗಿದ್ದಾರೆ. ಈ ಸಂದರ್ಭ ಜಗಳ ಬಿಡಿಸಲು ಬಂದಿದ್ದವರ ಮೇಲೂ ಗಾಂಜಾ ಅಮಲಿನಲ್ಲಿ ಇದ್ದವರು ದಾಳಿ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದಾಳಿಕೋರರ ವಿರುದ್ಧ ತಿರುಗಿಬಿದ್ದಿದ್ದಾರೆ. ಆಗ ಅಮಲಿನಲ್ಲಿದ್ದವರು ಬೈಕುಗಳಲ್ಲಿ ಪರಾರಿಯಾಗಿದ್ದಾರೆ.
ರಸ್ತೆ ತಡೆ ಮಾಡಿದ ಗ್ರಾಮಸ್ಥರು
ಗಾಂಜಾ ಅಮಲಿನಲ್ಲಿ ಯುವಕರು, ಸ್ಥಳೀಯರ ಮೇಲೆ ಹಲ್ಲೆ ನಡೆಸಿದವರನ್ನ ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿ ಹೊಸ ಸಿದ್ಧಾಪುರದ ಗ್ರಾಮದಸ್ಥರು ರಾತ್ರಿ ರಸ್ತೆ ತಡೆ ಮಾಡಿದರು. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳನ್ನು ಬಂಧಿಸುವವರೆಗೂ ರಸ್ತೆಯಿಂದ ಮೇಲೇಳುವುದಿಲ್ಲ ಎಂದು ಪಟ್ಟು ಹಿಡಿದರು.
ಮನವೊಲಿಸಿದ ಪೊಲೀಸರು
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ನ್ಯೂಟೌನ್ ಠಾಣೆ ಪೊಲೀಸರು, ಪ್ರತಿಭಟನಾಕಾರರ ಮನವೊಲಿಸಿದರು. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ ಮುಂದೆ ಹೀಗಾಗದಂತೆ ಕ್ರಮ ವಹಿಸುವುದಾಗಿ ತಿಳಿಸಿದರು. ಇದರಿಂದ ಪರಿಸ್ಥಿತಿ ತಿಳಿಯಾಯಿತು.
ಒಂದು ವಾರದ ಗಡುವು
ಇದೆ ಸಂದರ್ಭ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನಗರಸಭೆ ಮಾಜಿ ಸದಸ್ಯ ಅನಿಲ್ ಕುಮಾರ್, ಭದ್ರಾವತಿಯಲ್ಲಿ ಗಾಂಜಾ ಹಾವಳಿ ಮಿತಿ ಮೀರಿದೆ. ಸುತ್ತಮುತ್ತಲ ಭಾಗದಿಂದ ಹೊಸ ಸಿದ್ಧಾಪುರದಲ್ಲಿ ಗಾಂಜಾ ಸೇವನೆಗೆ ಬರುತ್ತಿದ್ದಾರೆ. ಪೊಲೀಸರಿಗೆ ಎಷ್ಟೆ ತಿಳಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನೊಂದು ವಾರದಲ್ಲಿ ಸಿಪಿಐ ಅವರು ಕ್ರಮದ ಭರವಸೆ ಕೊಟ್ಟಿದ್ದಾರೆ. ವಾರದ ಬಳಿಕ ಗಾಂಜಾ ಹಾವಳಿ ನಿಯಂತ್ರಣಕ್ಕೆ ಬಾರದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಸುತ್ತಮುತ್ತಲ ಊರುಗಳು, ಏರಿಯಾಗಳಿಂದ ಹೊಸ ಸಿದ್ಧಾಪುರಕ್ಕೆ ಬಂದು ಗಾಂಜಾ ಸೇವನೆ ಮಾಡುತ್ತಿರುವ ಆರೋಪವಿದೆ. ಇಲ್ಲಿನ ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡಿ, ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದು, ಆವಾಜ್ ಹಾಕುವುದು, ಹಲ್ಲೆ ನಡೆಸುವುದು ಆಗಾಗ ನಡೆಯುತ್ತಿದೆ. ಇದರಿಂದ ಹೊಸ ಸಿದ್ಧಾರಪುರದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಕತ್ತಲಾಗುತ್ತಿದ್ದಂತೆ ಮನೆಯಿಂದ ಹೊರಬರಲು ಹೆದರುವ ವಾತಾವರಣವಿದೆ.